ಬಂಗಾಡಿ: ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಜ.26ರಂದು ನಡೆಯಿತು.
ಇಂದು ಬೆಳಿಗ್ಗೆ ಶ್ರೀ ಗಣಪತಿ-ನಾಗಬ್ರಹ್ಮಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಶ್ರೀ ಗಣಪತಿ ಹೋಮ, ನವಕಕಲಶ ಪ್ರಧಾನ ಹೋಮ, ಸರ್ಪತ್ರಯ ಮಂತ್ರ ಹೋಮ, ಕಲಶಾಭಿಷೇಕ, ಆಶ್ಲೇಷ ಬಲಿ ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಗಣಪತಿ ದೇವರ ಸನ್ನಿಧಾನದಲ್ಲಿ ರಂಗಪೂಜೆ, ದೇವರ ಉತ್ಸವ, ನಾಗದೇವರ ಸನ್ನಿಧಾನದಲ್ಲಿ ಕಟ್ಟೆಪೂಜೆ, ವಸಂತ ಕಟ್ಟೆ ಪೂಜೆ, ಧರ್ಮದೈವ ವಾರಾಹಿ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಧನಂಜಯ ಅಜ್ರಿ, ಸೇವಾ ಟ್ರಸ್ಟ್ ನ ಅರ್ಧಯಕ್ಷ ಪಿ. ತಿಮ್ಮಪ್ಪ ಗೌಡ ಬೆಳಾಲು, ಗೌರವ ಸಲಹೆಗಾರ ಬಿ ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಮೋಹನ್ ಕೆ., ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಟ್ರಸ್ಟ್ ನ ಕಾರ್ಯಾಧ್ಯಕ್ಷ ಎಸ್.ಎನ್ ಭಟ್, ಸದಸ್ಯರು ಹಾಗೂ ಊರ ಪರವೂರ ಭಕ್ತಾದಿಗಳು ಭಾಗವಹಿಸಿದರು.
ಜ.27ರಂದು ಗಣಪತಿ ದೇವರ ಸನ್ನಿಧಾನದಲ್ಲಿ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೇಯಃ ಮಂತ್ರಾಕ್ಷತೆ ನಡೆಯಲಿರುವುದು.