ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya


ಉಜಿರೆ : ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವ ರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ ಮತ್ತೊಬ್ಬರ ಜೀವವನ್ನು ಉಳಿಸುವ ಶಕ್ತಿಯಿದೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ. ಅಭಿಪ್ರಾಯಪಟ್ಟರು.


ಡಾ. ಗೋಪಾಲಕೃಷ್ಣ.ಕೆ ಅವರು ಉಜಿರೆಯ ಬೆನಕ ಹೆಲ್ತ್ ಸೆಂಟರ್, ಬೆಳ್ತಂಗಡಿ ರೋಟರಿ ಕ್ಲಬ್, ಸೇವಾಭಾರತಿ ಕನ್ಯಾಡಿ, ಹವ್ಯಕ ವಲಯ ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಶುಭವಸರದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರಿನಲ್ಲಿ ನಡೆದ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಡಾ.ಗೋಪಾಲಕೃಷ್ಣ ಅವರು ಮಾತನಾಡುತ್ತಾ ರಕ್ತದಾನ ಜೀವ ಹೋಗುವ ಸ್ಥಿತಿಯಲ್ಲಿರುವ ರೋಗಿಯನ್ನು ಹೆಚ್ಚು ಕಾಲ ಬದುಕಲು ಮತ್ತು ಉನ್ನತ ಮಟ್ಟದ ಜೀವನ ಸಾಗಿಸಲು ನೆರವಾಗುತ್ತದೆ. ಗಾಯಗೊಂಡವರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಮತ್ತು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಯಾವುದೇ ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.


ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಅವರು ಮಾತನಾಡುತ್ತಾ ರಕ್ತದಾನ ಮಾಡುವುದರಿಂದ ಕೇವಲ ಸ್ವೀಕರಿಸಿದವರಿಗೆ ಮಾತ್ರ ಪ್ರಯೋಜನವಾಗುವುದಿಲ್ಲ, ರಕ್ತದಾನ ಮಾಡಿದವರಿಗೂ ಹೆಚ್ಚು ಸಹಾಯವಾಗುತ್ತದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ.ಕೆ.ವಿ, ಉಜಿರೆ ಹವ್ಯಕ ವಲಯದ ಅಧ್ಯಕ್ಷರಾದ ಶ್ಯಾಮ್ ಭಟ್ ಅತ್ತಾಜೆ, ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿಯ ಶಿವಕುಮಾರ್, ಮತ್ತು ಡಾ.ಭಾರತಿ.ಜಿ.ಕೆ ಉಪಸ್ಥಿತರಿದ್ದು ಶುಭಹಾರೈಸಿದರು.
ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ.ಭಟ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಯಶವಂತ ಪಟ್ವರ್ಧನ್ ವಂದಿಸಿದರು.


ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಪ್ರವೀಣ್ ಹಾಗೂ ಬೆನಕ ಆಸ್ಪತ್ರೆಯ ಮ್ಯಾನೇಜರ್ ದೇವಸ್ಯ ನೇತೃತ್ವದಲ್ಲಿ ಬೆನಕ ಆಸ್ಪತ್ರೆಯ ಸಿಬ್ಬಂದಿ, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರು ರಕ್ತದಾನ ಮಾಡಿದರು.

Leave a Comment

error: Content is protected !!