30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ‘ಕಾನೂನು ಸಾಕ್ಷರತಾ ಕ್ಲಬ್’ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ ರವರು ವಿದ್ಯಾರ್ಥಿಗಳಿಗೆ ಮತದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ ನ ಮುಖ್ಯಸ್ಥ ಸುಭಾಸ್ ಚಂದ್ರ ಜೈನ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ವಂದಿಸಿದರು.

ಈ ಸಂದರ್ಭದಲ್ಲಿ ಕಾನೂನು ಸಾಕ್ಷರತೆಯ ಬಗ್ಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಭಾಗಿತ್ವ ವಹಿಸಿತ್ತು.

Related posts

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!