25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀಮತಿ ವಿನಂತಿನಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗಣರಾಜ್ಯೋತ್ಸವ ದಿನದ ಆಚರಣೆಯ ಹಿನ್ನೆಲೆ, ಮಹತ್ವ ಹಾಗೂ ಭಾರತದ ಸಂವಿಧಾನ ರಚನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಯ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಶೇಟ್ ತಿಳಿಸಿಕೊಟ್ಟರು. ಶಾಲೆಯ ಅಧ್ಯಾಪಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya
error: Content is protected !!