April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಇಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಬೆಳ್ತಂಗಡಿ ತಹಶೀಲ್ದಾರು ಪೃಥ್ವಿ ಸಾನಿಕಂ ರವರು ಧ್ವಜರೋಹಣ ಮಾಡಿ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿ , ಶುಭಹಾರೈಸಿದರು. ಪ್ರದಾನ ಭಾಷಣಕಾರರಾಗಿ ನಡ ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಮೋಹನ್ ಗೌಡ ಭಾಗವಹಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದ ಲಾಯಿಲ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಬಿಸಿಎಂ ಇಲಾಖೆಯ ಜೋಸೆಫ್,ಸಮಾಜಕಲ್ಯಾಣಾಧಿಕಾರಿ ಹೇಮಚಂದ್ರ, ಪಶುಸಂಗೋಪಣಾ ಇಲಾಖೆ ಅಧಿಕಾರಿ ಮಂಜುನಾಯ್ಕ, ಬಿಸಿಎಂ ಇಲಾಖೆ ಜೋಸೆಫ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ನ.ಪಂ. ಮುಖ್ಯಾಧಿಕಾರಿ ರಾಜೇಶ್, ತೋಟಗಾರಿಕೆ ಇಲಾಖೆಯ ಚಂದ್ರಶೇಖರ್, ವೇಣೂರು ಐಟಇಐಯ ಜಾಕೋಬ್, ಎಲ್ಲಾ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು. ಸದಸ್ಯರು ಹಾಗೂ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.
ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಶಿಕ್ಷಕರಾದ ರಾಜೇಶ್ ಮತ್ತು ಮಂಗಳಾ ಕಾಯ೯ಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya
error: Content is protected !!