September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು.

ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು,ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಿತು., ಸಂಜೆ ಸಂಕಲ್ಪ, ರಂಗಪೂಜೆ ನಡೆಯಲಿದೆ.

ಈ ಸಂದರ್ಭದಲ್ಲಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ಮತ್ತು ಬಂಧು ಬಳಗ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಸಂಧ್ಯಾ ಟ್ರೇಡರ್ ರಾಜೇಶ್ ಪೈ ಹಾಗೂ ಊರವರು, ಭಕ್ತರು ಉಪಸ್ಥಿತರಿದ್ದರು.

Related posts

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿಯಲ್ಲಿ ಉದ್ಯೋಗಾವಕಾಶ ಸೆ.1ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!