ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

Updated on:

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ಮತ್ತು ಜ.30 ರಂದು ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವವು ನಡೆಯಲಿದೆ.

ಇಂದು ಬೆಳಿಗ್ಗೆ ಗಣಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಚಿತ್ರಕೂಟ ಪ್ರತಿಷ್ಠೆ, ನಾಗಪ್ರತಿಷ್ಠೆ, ಚೋರ ಶಾಂತಿ ಹೋಮ, ಜಲಾಭಿಷೇಕ, ಕ್ಷೀರಾಭಿಷೇಕ, ಬಿಂಬ ಅಭಿಷೇಕ, ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಾಂತರಾಮ ಎ. ನ್ಯೂ ಆರಿಗ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜಯಾನಂದ ಬಂಟ್ರಿಯಾಲ್, ಮಾಯಿಲಕೋಟೆ ದೈವಸ್ಥಾನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ದೇವಾಡಿಗ ಮತ್ತು ಸದಸ್ಯರು ,ಚಂದ್ರಹಾಸ ಪನ್ಯಾಡಿ ಇಂಜಿನಿಯರ್, ದೈವದ ಪರಿಚಾರಕರು ಮತ್ತು ಊರವರು ಉಪಸ್ಥಿತರಿದ್ದರು.

ಜ.30 ರಂದು ಬೆಳಿಗ್ಗೆ 10.00 ಗಂಟೆಗೆ ದೈವಗಳಿಗೆ ತಂಬಿಲ ಸೇವೆ, ಸಂಜೆ ಗಂಟೆ 6.00ರಿಂದ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವವು ನಡೆಯಲಿದೆ.

Leave a Comment

error: Content is protected !!