37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ.ಬಿಆರ್.ಅಂಬೇಡ್ಕರ್‌ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.


ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.. ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾಸುಭಾಷ್‌ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!