ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಇಂದು ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಇದರ ಸಹಯೋಗದಲ್ಲಿ ‘ಜ್ಞಾನವಾರಿಧಿ’ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 10 ನೇಯ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಗಗನ್ಯ ಇವಳು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ವನ್ನು ಪಡೆದಿರುತ್ತಾಳೆ.

previous post