ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ: ಭಾರತದ ಸಂವಿಧಾನ ಪ್ರಪಂಚದ ಅತ್ಯಂತ ಶ್ರೇಷ್ಠ ಸಂವಿಧಾನಗಳಲ್ಲೊಂದು, ಸಂವಿಧಾನದ ಆಶಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದತ್ತವಾಗಿ ನಮಗೆ ಒದಗಿ ಬಂದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪ್ರಜೆಗಳಾದ ನಾವು ಅರಿತುಕೊಳ್ಳಬೇಕು ಮತ್ತು ಪಾಲಿಸಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಕರೆ ನೀಡಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು. ಇದೇ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು.


ಸಮಾರಂಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಮತ್ತು ವಾಣಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು. ವಾಣಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಣ್ಯರನ್ನು ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ್ ಕೆ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುಹಾಸಿನಿ ಧನ್ಯವಾದವಿತ್ತರು. ಸಹಶಿಕ್ಷಕೆ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Leave a Comment

error: Content is protected !!