ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ.), (ಗಿನ್ನೆಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ) ನ ಆಡಳಿತಕ್ಕೊಳಪಟ್ಟ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ (ಪುಷ್ಪ-51 & ಪುಷ್ಪ-52) ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭ ಕಾರ್ಯಕ್ರಮವು ಜ.27 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಿವನ ಟ್ರಸ್ಟ್ ನ ಟ್ರಸ್ಟಿಯವರಾದ ಹೇಮಾವತಿ ವೀ. ಹೆಗ್ಗಡೆ,
ವಹಿಸಿದರು.
ಮೈಸೂರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸಾಹಿತಿ ಮತ್ತು ಸಂಶೋಧಕರು ಡಾ| ಕಬ್ಬಿನಾಲೆ ವಸಂತ ಭಾರಧ್ವಾಜ ಶುಭಾಶಂಸನೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಡಿ ಹರ್ಷೇಂದ್ರ ಕುಮಾರ್ ಭಾಗವಹಿಸಿದ್ದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ದ.ಕ ಜಿಲ್ಲಾ ಪ್ರಾಥಮಿಕ ಶಾಲಾ ಪರವಾಗಿ ಪಾಣೆಮಂಗಳೂರು ಶಾಲಾ ವಿದ್ಯಾರ್ಥಿ ಸಮರ್ ಭಾಷಣ, ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ಪರವಾಗಿ ಪ್ರಣಾತಿ ಇನ್ನಾಜೆ ಶ್ಲೋಕ ನಡೆಯಿತು.
ವರ್ಷಿಣಿ ವಿ ಎಸ್ ಕೊಪ್ಪ, ಪ್ರಜ್ಞಾ ವೆಂ. ಭಟ್ ಶಿರಸಿ ಇವರಿಂದ ಭಾಷಣ ಮತ್ತು ಶ್ಲೋಕ ಕಾರ್ಯಕ್ರಮವು ಜರುಗಿತು.
ಈ ಸಂದರ್ಭದಲ್ಲಿ ಸ್ಪರ್ಧಾ ವಿಜೇತಾ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮವು ನಡೆಯಿತು.
ಕು. ಸುಪ್ರೀತಾ ಧರ್ಮಸ್ಥಳ ಪ್ರಾರ್ಥಿಸಿ, ನಿರ್ದೇಶಕ ಡಾ| ಐ ಶಶಿಕಾಂತ್ ಜೈನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಕಾರ್ಕಳ ಶ್ರೀ ಭುವನೇಂದ್ರ ಪ್ರೌಢ ಶಾಲಾ ಶಿಕ್ಷಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಬಿ ಸೀತಾರಾಮ ತೋಳ್ಪಾಡಿತ್ತಾಯ ಧನ್ಯವಾದವಿತ್ತರು.