
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.26ರಂದು ಅಲ್ಕಾರ್ಗೋ ಲೊಜಿಸ್ಟಿಕ್ ದಿಶಾ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಿಯೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್‌ರವರು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತು ಉತ್ತಮ ಪ್ರಜೆಯಾಗಿ ಬಾಳಬೇಕು ಸಮಾಜಕ್ಕೆ ಮಾದರಿಯಾಗಬೇಕೆಂದು ಹಾರೈಸಿದರು.
ಸಂಸ್ಥೆಯ ಆಡಳಿತ ಸದಸ್ಯೆ ಮೇರಿ ಯು.ಪಿ.ಯವರು 25 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು.