29.7 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಶಾಲೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಟಿಕ್ಕಾ ಸಾಹೇಬ್ ರವರು ನೆರವೇರಿಸಿ ಮಾತನಾಡಿ ಗಣರಾಜ್ಯೋತ್ಸವ ಆಚರಣೆಯ ಮಹತ್ವ ಮತ್ತು ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿಯವರು ವಹಿಸಿ ಮಾತನಾಡಿ ಪ್ರಜಾಪ್ರಭುತ್ವ ದಿನಕ್ಕಾಗಿ ಹೋರಾಟ ನಡೆಸಿದ ಮಹಾನ್ ನಾಯಕರ ಬಗ್ಗೆ ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಪ್ರಜಾಪ್ರಭುತ್ವ ದಿನದ ಬಗ್ಗೆ ಭಾಷಣವನ್ನು ಏರ್ಪಡಿಸಲಾಯಿತು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲೆಯ ಎಲ್ಲಾ ಮಕ್ಕಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ರವರು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ನಿಶಾಂತ್ ರವರು ಸ್ವಾಗತಿಸಿ, ಶ್ರೀಮತಿ ವೇದಾವತಿ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕ ಪವನ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya
error: Content is protected !!