ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜ.28ರಂದು ಶ್ರೀ ದೇವಳಕ್ಕೆ ಸಂಬಂಧಿಸಿದ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ ಶ್ರೀ ದೇವರಿಗೆ ಮಂಜೂರಾಗಿರುವ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಕಟ್ಟೆಯಲ್ಲಿ ನಾಗಪ್ರತಿಷ್ಠೆ ಹಾಗೂ ಶಿಲಾಮಯ ಗುಡಿಯಲ್ಲಿ ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ ಹಾಗೂ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಜ.27ರಂದು ದೇವತಾ ಪ್ರಾರ್ಥನೆ, ನಾಗಬನದಲ್ಲಿ ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದ ಶುದ್ಧಿ, ಸ್ಥಳ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ಪ್ರಕಾರ ಬಲಿ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್, ಅರ್ಚಕರು,ಸಿಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.