September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜ.28ರಂದು ಶ್ರೀ ದೇವಳಕ್ಕೆ ಸಂಬಂಧಿಸಿದ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ ಶ್ರೀ ದೇವರಿಗೆ ಮಂಜೂರಾಗಿರುವ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಕಟ್ಟೆಯಲ್ಲಿ ನಾಗಪ್ರತಿಷ್ಠೆ ಹಾಗೂ ಶಿಲಾಮಯ ಗುಡಿಯಲ್ಲಿ ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ ಹಾಗೂ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಜ.27ರಂದು ದೇವತಾ ಪ್ರಾರ್ಥನೆ, ನಾಗಬನದಲ್ಲಿ ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದ ಶುದ್ಧಿ, ಸ್ಥಳ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ಪ್ರಕಾರ ಬಲಿ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಕೆ. ವಿ. ಶ್ರೀನಿವಾಸ್, ಅರ್ಚಕರು,ಸಿಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!