32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

ಬೆಳ್ತಂಗಡಿ: : ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಲಾ ₹ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಆಯನ ಮತ್ತು ಸಿರಿಗಳ ಜಾತ್ರೋತ್ಸವದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ ಹಸ್ತಾಂತರಿಸಿದರು.

ಕೂಕ್ರಬೆಟ್ಟು ಶಾಲೆಯ ಮಂಜೂರಾದ ಪತ್ರವನ್ನು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಶಾಲಾ ಮುಖ್ಯ ಶಿಕ್ಷಕಿ ಸುಫಲಾ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕೋಶಾಧಿಕಾರಿ ಅಶೋಕ್‌ ಕೋಟ್ಯಾನ್‌ ಸ್ವೀಕರಿಸಿದರು.

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಮಂಜೂರಾತಿ ಪತ್ರವನ್ನು ಶಾಲಾ ಅಭಿವೃದ್ಧಿ (ಬೆಟರ್‌ಮೆಂಟ್‌) ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶಾಲಾ ಮುಖ್ಯಶಿಕ್ಷಕ ಕೃಷ್ಣ ಭಟ್‌, ಎಸ್‌ಡಿಎಂಸಿ ಉಪಾಧ್ಯಕ್ಷ ಮೋಹನ ಅಂಡಿಂಜೆ ಸ್ವೀಕರಿಸಿದರು.

ಚಿತ್ರ: ಗಣೇಶ್‌ ಹೆಗ್ಡೆ ನಾರಾವಿ

Related posts

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!