September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

ಬೆಳ್ತಂಗಡಿ: : ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಲಾ ₹ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಆಯನ ಮತ್ತು ಸಿರಿಗಳ ಜಾತ್ರೋತ್ಸವದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ ಹಸ್ತಾಂತರಿಸಿದರು.

ಕೂಕ್ರಬೆಟ್ಟು ಶಾಲೆಯ ಮಂಜೂರಾದ ಪತ್ರವನ್ನು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಶಾಲಾ ಮುಖ್ಯ ಶಿಕ್ಷಕಿ ಸುಫಲಾ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕೋಶಾಧಿಕಾರಿ ಅಶೋಕ್‌ ಕೋಟ್ಯಾನ್‌ ಸ್ವೀಕರಿಸಿದರು.

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಮಂಜೂರಾತಿ ಪತ್ರವನ್ನು ಶಾಲಾ ಅಭಿವೃದ್ಧಿ (ಬೆಟರ್‌ಮೆಂಟ್‌) ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶಾಲಾ ಮುಖ್ಯಶಿಕ್ಷಕ ಕೃಷ್ಣ ಭಟ್‌, ಎಸ್‌ಡಿಎಂಸಿ ಉಪಾಧ್ಯಕ್ಷ ಮೋಹನ ಅಂಡಿಂಜೆ ಸ್ವೀಕರಿಸಿದರು.

ಚಿತ್ರ: ಗಣೇಶ್‌ ಹೆಗ್ಡೆ ನಾರಾವಿ

Related posts

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya
error: Content is protected !!