September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿಶುಭ ವಿವಾಹ

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ಬುಧವಾರದಂದು ಸಂಜೆ 6.45ಕ್ಕೆ ಗೋಧೋಳಿ  ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648, 8147263422

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!