ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಜ.27ರಂದು ನಡೆಯಿತು.
ಗಣೇಶ್ ಕುಂದರ್ ಮಾತನಾಡಿ ಶಾಲೆಯ ಶೈಕ್ಷಣಿಕ ಪ್ರಗತಿಯು ಉತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ, ಶಾಲೆಯ ಪ್ರಗತಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು.
ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು.
ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರೇ ಕಾರಣ ಅದೇ ರೀತಿ ಮಕ್ಕಳ ಬಗ್ಗೆ ಬಹಳ ಕಾಳಜಿಯನ್ನು ನೀಡಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷೆ ಜಯಂತಿ , ಜಗದೀಶ್, ಪ್ರಶಾಂತ್ ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ , ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತಾ , ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.
ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಮತ್ತು ಚೈತ್ರ ಶ್ರೀ ನಿರೂಪಿಸಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್. ರಾವ್ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕ ಮಧು ವಂದಿಸಿದರು.