ಬೆಳ್ತಂಗಡಿ : ವೇಣೂರಿನಲ್ಲಿ ಸಂಭವಿಸಿದ ಪಟಾಕಿ ಗೋದಾಮು ಸ್ಪೋಟದಲ್ಲಿ ಮೂವರ ಸಾವು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲ್ಪಟ್ಟಿದೆ.
ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರು ಪರಿಶೀಲನೆ ಮಾಡಲು ಮಂಗಳೂರು ಮತ್ತು ಪುತ್ತೂರು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಫೆಬ್ರವರಿ 5 ರೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮುಂದಿನ ಆದೇಶದವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿ ಪಾಲನೆ ಕುರಿತಾಗಿ ಮರು ಪರಿಶೀಲನೆಗಾಗಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.