37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜ.29 ರಂದು ಜರುಗಿತು.

ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ ನಡೆಯಿತು.

ನಂತರ ರಾಜ್ಯ ಧಾರ್ಮಿಕ ಇಲಾಖೆಯ ವತಿಯಿಂದ ನಿರ್ಮಿಸಲಾದ ತಾಯಂದಿರು ಮಕ್ಕಳಿಗೆ ಹಾಲುಣಿಸುವ ಕೊಠಡಿಯನ್ನು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ದೀಪ ಬೆಳಗಿಸುವುದರ ಮೂಲಕ ಲೋಕಾರ್ಪಣೆಗೊಳಿಸಿದರು.

ನಂತರ ಕ್ಷೇತ್ರ ಪರಿಚಯ ಪುಸ್ತಕವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರು ಬಿಡುಗಡೆಗೊಳಿಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರದ ವಾಸ್ತು ತಜ್ಞ ಜಗನ್ನಿವಾಸ ರಾವ್ ಪುತ್ತೂರು ಮಾತನಾಡಿ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯವು ಅತ್ಯಂತ ಅಲ್ಪ ಸಮಯದಲ್ಲಿ ಹೆಚ್ಚು ಅಭಿವೃದ್ಧಿಯನ್ನು ಕಂಡಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ, , ಕೊಕ್ಕಡ ಕೆನರಾ ಬ್ಯಾಂಕಿನ ಪ್ರಬಂಧಕ ಅಂಕಿತ್ ಸಿಂಗ್, ಬೆಳ್ತಂಗಡಿ ಎ.ಪಿ,ಎಮ್.ಸಿ ಕಾರ್‍ಯದರ್ಶಿ ರವೀಂದ್ರ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಸ್ವಾಗತಿಸಿದರು. ಬಾಲಕೃಷ್ಣ ನೈಮಿಷ ಧನ್ಯವಾದವಿತ್ತರು. ಪುರಂದರ ಕಡೀರ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya
error: Content is protected !!