38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡಿದ್ದು ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು‌.‌ ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ‌.

Related posts

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!