September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಜ.30 ರಂದು ಧರ್ಮಸ್ಥಳದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ಮಧ್ಯೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ ಒಪ್ಪಿಗೆ ಸೂಚಿಸಲಾಯಿತು.


ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‌ನ ಸಹಾಯಕ ನಿರ್ದೇಶಕ ಡಾ. ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ. ಪ್ರಸನ್ನ ಎನ್. ರಾವ್, ಉಪಪ್ರಾಂಶುಪಾಲರಾದ ಡಾ. ಶೈಲಜಾ, ಯು., ಸಂಹಿತಾ ಸಿದ್ಧಾಂತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಾಥ ವೈದ್ಯ, ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿಕುಮಾರ್ ಎಂ. ಮತ್ತು ಸಂಹಿತಾ ಸಿದ್ಧಾಂತ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!