ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಗೌಡ ವಾದ್ಯಕೋಡಿ ಇವರ ಅಧ್ಯಕ್ಷತೆಯಲ್ಲಿ ಜ.28 ರಂದು ಕೊಯ್ಯೂರಿನ ಪಂಚದುರ್ಗಾ ಸಭಾಭವನದಲ್ಲಿ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕಾರ್ಯಕ್ರಮ ಉದ್ಘಾಟಿಸಿ, ಜಾತಿ ಸಂಘಗಳು ನಮ್ಮ ರೂಢಿ, ಸಂಪ್ರದಾಯ, ಆಚಾರ ವಿಚಾರಗಳನ್ನು ಹಂಚಿಕೊಳ್ಳಲು ಮತ್ತು ಉಳಿಸಿ, ಬೆಳೆಸಲು ಸಹಾಯಕ, ಈ ಕಾರಣದಿಂದ ಯುವ ಜನತೆ ಹೆಚ್ಚೆಚ್ಚು ಭಾಗವಹಿಸಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ‌ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಕಲಿಕೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಗೀತಾ ರಾಮಣ್ಣ ಗೌಡ, ಕೊಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ದಯಾಮಣಿ ಮತ್ತು ಉಪಾಧ್ಯಕ್ಷ ಹರೀಶ್ ಗೌಡ ಇವರುಗಳನ್ನು ಸನ್ಮಾನಿಸಲಾಯಿತು.

ಸಂಘದ ಗೌರವಾಧ್ಯಕ್ಷ ನಾರಾಯಣ ಗೌಡ , ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಉಪಸ್ಥಿತರಿದ್ದರು. ದಿನೇಶ್ ಬಿ., ಶ್ರೀಮತಿ ಚೇತನಾ, ಶ್ರೀಮತಿ ದೀಪಿಕಾ ಸನ್ಮಾನಿತ ವಿದ್ಯಾರ್ಥಿಗಳ ಅಭಿನಂದನಾ ಪತ್ರ ವಾಚಿಸಿದರು. ಸಂಘದ ಕಾರ್ಯದರ್ಶಿ ಕೇಶವ ಗೌಡ ವರದಿ ವಾಚಿಸಿದರು. ಕುಮಾರಿ ಶಾರ್ವಿಯ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ದಾಮೋದರ ಗೌಡ ಅತಿಥಿಗಳನ್ನು ಸ್ವಾಗತಿಸಿದರು. ಯುವ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ವಂದಿಸಿದರು.ವಿಜಯ ಕುಮಾರ್ ಎಂ ಕೊಯ್ಯೂರು ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!