September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಗೌಡ ವಾದ್ಯಕೋಡಿ ಇವರ ಅಧ್ಯಕ್ಷತೆಯಲ್ಲಿ ಜ.28 ರಂದು ಕೊಯ್ಯೂರಿನ ಪಂಚದುರ್ಗಾ ಸಭಾಭವನದಲ್ಲಿ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕಾರ್ಯಕ್ರಮ ಉದ್ಘಾಟಿಸಿ, ಜಾತಿ ಸಂಘಗಳು ನಮ್ಮ ರೂಢಿ, ಸಂಪ್ರದಾಯ, ಆಚಾರ ವಿಚಾರಗಳನ್ನು ಹಂಚಿಕೊಳ್ಳಲು ಮತ್ತು ಉಳಿಸಿ, ಬೆಳೆಸಲು ಸಹಾಯಕ, ಈ ಕಾರಣದಿಂದ ಯುವ ಜನತೆ ಹೆಚ್ಚೆಚ್ಚು ಭಾಗವಹಿಸಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ‌ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಕಲಿಕೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಗೀತಾ ರಾಮಣ್ಣ ಗೌಡ, ಕೊಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ದಯಾಮಣಿ ಮತ್ತು ಉಪಾಧ್ಯಕ್ಷ ಹರೀಶ್ ಗೌಡ ಇವರುಗಳನ್ನು ಸನ್ಮಾನಿಸಲಾಯಿತು.

ಸಂಘದ ಗೌರವಾಧ್ಯಕ್ಷ ನಾರಾಯಣ ಗೌಡ , ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಉಪಸ್ಥಿತರಿದ್ದರು. ದಿನೇಶ್ ಬಿ., ಶ್ರೀಮತಿ ಚೇತನಾ, ಶ್ರೀಮತಿ ದೀಪಿಕಾ ಸನ್ಮಾನಿತ ವಿದ್ಯಾರ್ಥಿಗಳ ಅಭಿನಂದನಾ ಪತ್ರ ವಾಚಿಸಿದರು. ಸಂಘದ ಕಾರ್ಯದರ್ಶಿ ಕೇಶವ ಗೌಡ ವರದಿ ವಾಚಿಸಿದರು. ಕುಮಾರಿ ಶಾರ್ವಿಯ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ದಾಮೋದರ ಗೌಡ ಅತಿಥಿಗಳನ್ನು ಸ್ವಾಗತಿಸಿದರು. ಯುವ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ವಂದಿಸಿದರು.ವಿಜಯ ಕುಮಾರ್ ಎಂ ಕೊಯ್ಯೂರು ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya
error: Content is protected !!