39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

ವೇಣೂರು:ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ 22 ರಿಂದ ಮಾ.1 ರವರೆಗೆ ನಡೆಯಲಿದ್ದು ಕಾರ್ಯಕ್ರಮದ ಯಶಸ್ವಿಗೆ ಸರಕಾರದ ಅಧಿಕಾರಿಗಳೊಂದಿಗೆ ಸಮಾಲೋಚನೆ ಹಾಗೂ ಪ್ರಗತಿ‌ ಪರಿಶೀಲನೆ ಸಭೆಯು ಜ.31 ರಂದು ವೇಣೂರು ಬಾಹುಬಲಿ ಸಭಾಭವನದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ತಯಾರಿಗಳು ಭರದಿಂದ ಸಾಗಿದ್ದು ಹಲವಾರು ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರು ಪರಿವೀಕ್ಷಣೆ ನಡೆಸಿ ಅಗತ್ಯ ತಿದ್ದುಪಡಿಗಳ ಬಗ್ಗೆ ಸರಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿದರು.12 ವರ್ಷಗಳ ಬಳಿಕ ನಡೆಯುವ ಮಹಾಮಜ್ಜನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದೆ. ಅಟ್ಟಣಿಗೆಯ ಎಲ್ಲ ಭಾಗಗಳನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ಪ್ರತಿಹಂತದಲ್ಲೂ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದರು.ಅಟ್ಟಳಿಗೆಯನ್ನು ಪರೀಕ್ಷಿಸಿ ಲೋಕೋಪಯೋಗಿ ಇಲಾಖೆ ಸರ್ಟಿಫಿಕೇಟ್ ನೀಡಬೇಕೆಂದು ಶಾಸಕರು ತಿಳಿಸಿದರು.

ಬಾಹುಬಲಿ ಬೆಟ್ಟದ ಸುತ್ತಲೂ ರಸ್ತೆ ಢಾಮರೀಕರಣಕ್ಕೆ ಸ್ಥಳದಲ್ಲೇ ಸೂಚನೆ ನೀಡಿದರು. ರಸ್ತೆ ಡಾಮರೀಕರಣ,ಕುಡಿಯುವ ನೀರು,ಸ್ವಚ್ಚತೆ, ಪಾರ್ಕಿಂಗ್, ವಸತಿ, ಭದ್ರತೆ, ನಗರಲಂಕಾರ,ವಿದ್ಯುತ್ ದೀಪಾಲಂಕಾರ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ, ಆರೋಗ್ಯ,ಸ್ವಾಗತ ದ್ವಾರ, ಹಾಗೂ ಇತರ ವ್ಯವಸ್ಥೆಯ ಬಗ್ಗೆ ಶೀಘ್ರವಾಗಿ ಸಂಬಂಧಿಸಿದ ಇಲಾಖೆಯವರು ಕೂಡಲೇ ಕ್ರಮ ಕೈಗೊಳ್ಳಬೇಕೆಂದರು. ಹೆಚ್ಚಾಗಿ ಜನಸಂದಣಿ ಸೇರುವ ಸ್ಥಳಗಳಲ್ಲಿ ಹಾಗೂ ಹಿರಿಯ ನಾಗರೀಕರು ಕೂರುವ ಜಾಗದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳನ್ನು ತಿಳಿಸಿದರು.ಅಭಿಷೇಕ ಮಾಡುವ ಅವಧಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಆ ವೇಳೆಯಲ್ಲಿ ಭಕ್ತಾದಿಗಳು ಅನುಭವಿಸುವ ಸಣ್ಣಪುಟ್ಟ ಸಮಸ್ಯೆಗಳನ್ನೂ ವಿವರಿಸಿದರು. ಯಾವುದೇ ಹಂತದಲ್ಲೂ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಇಲಾಖೆಗೆ ತಿಳಿಸಿದರು.ಲಕ್ಷಾಂತರ ಜನರು ಸೇರುವ ಕಾರ್ಯಕ್ರಮವಾಗಿರುವುದರಿಂದ ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮರ ಹಾಗೂ ನೆಟ್ ವರ್ಕ್ ಸಮಸ್ಯೆಯಿರುವುದರಿಂದ ಮೊಬೈಲ್ ಟವರ್ ನ‌‌ ಅವಶ್ಯಕತೆ ಇದೆಯೆಂದು ಪಡ್ಯಾರಬೆಟ್ಟುವಿನ ವಿಕಾಸ್ ಜೈನ್ ತಿಳಿಸಿದರು.ವೇದಿಕೆಯಲ್ಲಿ ಬೆಳ್ತಂಗಡಿ ತಹಿಸಿಲ್ದಾರ್ ಪೃಥ್ವಿ ಸಾನಿಕಮ್, ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ,ವೇಣೂರು ಗ್ರಾಮ‌ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಉಪಸ್ಥಿತರಿದ್ದರು.

ಮಸ್ತಕಾಭಿಷೇಕದ ಸಮನ್ವಯಾಧಿಕಾರಿ ಡಾ.ಜಯಕೀರ್ತಿ ಜೈನ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರರವರು ಇಗಾಗಲೇ ನಡೆದಿರುವ ಹಲವಾರು ಪ್ರಗತಿಯ ಕೆಲಸವನ್ನು ತಿಳಿಸಿದರು.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ