ತಣ್ಣೀರುಪಂತ :ತಣ್ಣೀರುಪಂತ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.31ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ವಹಿಸಿದರು.
ಲೆಕ್ಕಪತ್ರವನ್ನು ಆನಂದ್ ಸಭೆಗೆ ಮಂಡಿಸಿದರು.
ಸಭೆಯಲ್ಲಿ ತುರ್ಕಳಿಕೆಯಲ್ಲಿ ಗ್ರಾಮ ಪಂಚಾಯತ್ ನೀಡಿದ ಮನೆ ನಿವೇಶನ ನಿಗದಿಪಡಿಸಿದ ಜಾಗದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಇದೀಗ 28 ಕುಟುಂಬಗಳು ಸರಿಯಾದ ದಾಖಲೆಗಾಗಿ ಆತಂಕ ದಿಂದ ಅಲೆಯು ಸ್ಥಿತಿ ನಿರ್ಮಾಣವಾಗಿದೆ ಎಂದು ಕೆ. ಎಸ್. ಅಬ್ದುಲ ತಿಳಿಸಿದರು.
ಈ ಬಗ್ಗೆ ಪಂಚಾಯತ್ ನಿಂದ ತಪ್ಪಾಗಿದ್ದು ಆದಷ್ಟು ಬೇಗ ಸರಿ ಮಾಡುತ್ತೇವೆ ಎಂದು ಕಂದಾಯ ಇಲಾಖೆಯವರು ತಿಳಿಸಿದರು.
ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಆರ್ಥಿಕ ಸಾಕ್ಷಾರತಾ ಸಲಹೆಗಾರರು, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಎಲ್ಲಾ ಸದಸ್ಯರು, ಅಭಿವೃದ್ದಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.