April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ತಾಲೂಕಿನ ಮಡಿವಾಳ ಸಂಘ ಇದರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ಫೆ.1 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದರು.
ಉಜಿರೆ ಧ.ಮಂ. ಕಾಲೇಜು ಉಪನ್ಯಾಸಕ ಹಳೆಮನೆ ರಾಜಶೇಖರ ಅವರು ಮಡಿವಾಳ ಮಾಚಿದೇವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಶ್ರೀಧರ್ , ಸಂಘದ ಕಾರ್‍ಯದರ್ಶಿ ಅರುಣ್ ಸೊರಕೆ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತು ಸದಸ್ಯರು ಹಾಗೂ ಗ್ರಾ.ಪಂ. ಅಧ್ಯಕ್ಷ , ಸದಸ್ಯರು ತಾಲೂಕು ಮಟ್ಟದ ಅಧಿಕಾರಿಗಳು ಮಡಿವಾಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ತಾ.ಪಂ. ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿದರು. ತಾಲೂಕು ಕಂದಾಯ ಇಲಾಖೆ ಸಿಬ್ಬಂದಿ ಹೇಮಾ ಕಾಯ೯ಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya
error: Content is protected !!