September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ತಾಲೂಕಿನ ಮಡಿವಾಳ ಸಂಘ ಇದರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ಫೆ.1 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದರು.
ಉಜಿರೆ ಧ.ಮಂ. ಕಾಲೇಜು ಉಪನ್ಯಾಸಕ ಹಳೆಮನೆ ರಾಜಶೇಖರ ಅವರು ಮಡಿವಾಳ ಮಾಚಿದೇವರ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಶ್ರೀಧರ್ , ಸಂಘದ ಕಾರ್‍ಯದರ್ಶಿ ಅರುಣ್ ಸೊರಕೆ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತು ಸದಸ್ಯರು ಹಾಗೂ ಗ್ರಾ.ಪಂ. ಅಧ್ಯಕ್ಷ , ಸದಸ್ಯರು ತಾಲೂಕು ಮಟ್ಟದ ಅಧಿಕಾರಿಗಳು ಮಡಿವಾಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ತಾ.ಪಂ. ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿದರು. ತಾಲೂಕು ಕಂದಾಯ ಇಲಾಖೆ ಸಿಬ್ಬಂದಿ ಹೇಮಾ ಕಾಯ೯ಕ್ರಮ ನಿರೂಪಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya
error: Content is protected !!