28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಧರ್ಮಸ್ಥಳ: ದೇವರ ಪೂಜೆ, ಆರಾಧನೆ, ಅಭಿಷೇಕದಿಂದ ಪಾಪಗಳ ಕ್ಷಯವಾಗಿ ಪುಣ್ಯ ಸಂಚಯವಾಗುತ್ತದೆ ಎಂದು ಪೂಜ್ಯ ದಿವ್ಯಸಾಗರ ಮುನಿಮಹಾರಾಜರು ಹೇಳಿದರು.
ಅವರು ಫೆ. 2 ರಂದು ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕದ ಸಂದರ್ಭ ಮಂಗಲ ಪ್ರವಚನ ನೀಡಿದರು.

ಶ್ರದ್ಧಾ-ಭಕ್ತಿಯಿಂದ ದೇವರಪೂಜೆ, ಅಭಿಷೇಕ ಮಾಡುವುದರಿಂದ ಎಲ್ಲಾ ಸಂಕಟಗಳ ನಿವಾರಣೆಯಾಗಿ ಜೀವನ ಪಾವನವಾಗುತ್ತದೆ. ಆತ್ಮಕಲ್ಯಾಣವಾಗುತ್ತದೆ. ಸುಖ-ಶಾಂತಿ ಸಿಗುತ್ತದೆ ಎಂದು ಹೇಳಿದರು.


ಪೂಜ್ಯ ಆದಿಸಾಗರ ಮುನಿಮಹಾರಾಜರು ಪ್ರವಚನ ನೀಡಿ ನಾವು ಬೀಜ ಬಿತ್ತಿದಂತೆ ಫಲಸಿಗುವ ಹಾಗೆ ಸ್ವಾರ್ಥ ರಹಿತರಾಗಿ ಸತ್ಕಾರ್ಯ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ನಿತ್ಯವೂ ವೃತ-ನಿಯಮಗಳ ಪಾಲನೆಯೊಂದಿಗೆ ದೇವರ ಪೂಜೆ, ಮುನಿಗಳಿಗೆ ಆಹಾರದಾನ ಮಾಡಿದರೆ ಆತ್ಮಕಲ್ಯಾಣವಾಗುತ್ತದೆ ಎಂದು ಹೇಳಿದರು.


ಕಾರ್ಕಳದ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು.


ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ರತ್ನಗಿರಿಯಲ್ಲಿ 216 ಕಲಶಗಳಿಂದ ಜಲಾಭಿಷೇಕ ಹಾಗೂ ಎಳನೀರು, ಗಂಧ, ಚಂದನ, ಅಷ್ಟಗಂಧ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.

Related posts

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
error: Content is protected !!