28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಹಬ್ಬಿದ ಘಟನೆ ನಡೆದಿದೆ.


ರಸ್ತೆ ಮೂಲಕ ಕಾರ್ಯಕ್ರಮ ಒಂದಕ್ಕೆ ತೆರಳುತ್ತಿದ್ದ ಬೈಕ್ ಸವಾರರು ಬೆಂಕಿ ವ್ಯಾಪಿಸುವುದು ಕಂಡು ಸ್ಥಳೀಯರಿಗೆ ಮಾಹಿತಿ ನೀಡಿದರು.


ತಕ್ಷಣ ಸ್ಥಳಕ್ಕಾಗಮಿಸಿದ ಪ್ರಭಾಕರ ಪಟವರ್ಧನ್, ಗುರುಪ್ರಸಾದ್ ಗೋಖಲೆ,ಸುನಿಲ್ ಹಾಗೂ ಸಮೀಪದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆಂಕಿ ಇನ್ನಷ್ಟು ವ್ಯಾಪಿಸಿದಂತೆ ಕ್ರಮ ಕೈಗೊಂಡರು.
ಒಂದು ವೇಳೆ ಬೆಂಕಿ ಇನ್ನಷ್ಟು ಪಸರಿಸುತ್ತಿದ್ದರೆ ರಬ್ಬರ್ ತೋಟ ಸಹಿತ ಇತರ ಕೃಷಿ ಬೆಂಕಿಗೆ ಆಹುತಿಯಾಗುವ ಸಾಧ್ಯತೆ ಇತ್ತು.

Related posts

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya
error: Content is protected !!