25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

ಬೆಳ್ತಂಗಡಿ : ಕಾರು ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿಯ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು. ಇದರಲ್ಲಿ ಬೈಕ್ ಸವಾರ ಬೆಳ್ತಂಗಡಿಯ ರಮೇಶ್ ಶೆಟ್ಟಿ ಮತ್ತು ಪ್ರೇಮ ದಂಪತಿಯ ಎರಡನೇ ಪುತ್ರ ಪ್ರದೀಶ್ ಶೆಟ್ಟಿ(27) ಎಂಬಾತ ಸಾವನ್ನಪ್ಪಿದ ಯುವಕ.

ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಬೈಕ್ಕಿನಲ್ಲಿ ಬರುತಿದ್ದ ವೇಳೆ ಮಂಗಳೂರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪ್ರದೀಶ್ ಶೆಟ್ಟಿ ಬೆಳ್ತಂಗಡಿಯ ಮುತ್ತೂಟ್ಟು ಫೈನಾನ್ಸ್ ಸಂಸ್ಥೆಯೊಂದರಲ್ಲಿ ನೌಕರಿಯಲ್ಲಿದ್ದು. ಸಂಸ್ಥೆಯ ಕೆಲಸಕ್ಕಾಗಿ ಮಂಗಳೂರಿಗೆ ತೆರಳಿದ್ದ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಾಯಿಲ ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಿಸ್ತೃತ ವರದಿ ಸಲ್ಲಿಕೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!