26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

ಮೊಗ್ರು :ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ದೈವಸ್ಥಾನದ ವತಿಯಿಂದ ಪ್ರತಿ ವರ್ಷ ಸಾಮಾಜಿಕ ಚಟುವಟಿಕೆಗೆ ಪ್ರೋತ್ಸಾಹವಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತಿದ್ದು ಈ ವರ್ಷ  ಸಣ್ಣ ಮಕ್ಕಳಿಗೆ ಧರ್ಮ ಶಿಕ್ಷಣ ಮತ್ತು ನೋಡಿ ಕಲಿ ಶಿಕ್ಷಣದ  ಭಾಗವಾದ ಸ್ಮಾರ್ಟ್ ಕ್ಲಾಸ್ ಗೆ ಅನುಕೂಲವಾಗಲು ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಮತ್ತು ಹೆಚ್.ಡಿ ಸೆಟ್ ಆಫ್ ಬಾಕ್ಸ್ (6 ತಿಂಗಳ ರಿಚಾರ್ಜ್ ಪ್ಯಾಕೇಜ್)ನ್ನು ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮುಗೇರಡ್ಕ ದೈವಸ್ಥಾನದ ಆಡಳಿತ ಮೊಕ್ತೇಶರರಾದ ರಾಮಣ್ಣ ಗೌಡ ದೇವಸ್ಯ ಗುತ್ತು, ಮನೋಹರ್ ಗೌಡ ಅಂತರ, ಸುಧಾಕರ್ ಗೌಡ ನೈಮಾರ್, ರಾಮಣ್ಣ ಗೌಡ ಎರ್ಮಲ,ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದಂಬೆತ್ತಿಮಾರು,ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷರಾದ ರಮೇಶ್ ನೆಕ್ಕರಾಜೆ, ಚಂದ್ರಹಾಸ ದೇವಸ್ಯ, ಸತ್ಯಪ್ರಕಾಶ್ ಉಂತನಾಜೆ, ವಿನಯ್, ವರುಣ್  ಮಾತಾಜಿ ಗೀತಾ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya
error: Content is protected !!