ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ಶಾಲೆಯ ಕಟ್ಟಡದ ಲೋಕಾರ್ಪಣಾ ಸಮಾರಂಭ ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ವೈಭವ ಫೆ.17ರಂದು ನಡೆಯಲಿದೆ.
ಅಂದು ಬೆಳಿಗ್ಗೆ 9.30ಕ್ಕೆ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ರಾಷ್ಟ್ರಧ್ವಜ ಕಟ್ಟೆ ಉದ್ಘಾಟಿಸುವರು. ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್ ಧ್ವಜಾರೋಹಣ ನೆರವೇರಿಸುವರು. ಎಸ್‌ಡಿಎಂಸಿ ಅಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ಮರೋಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಶ್ರೀ ಜೈನ್, ಉಪಾಧ್ಯಕ್ಷ ಶುಭರಾಜ ಹೆಗ್ಡೆ, ಸದಸ್ಯರಾದ ಅಶೋಕ್ ಕೋಟ್ಯಾನ್, ಯಶೋದಾ, ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಡ್ವರ್ಡ್ ಭಾಗವಹಿಸುವರು.
ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಗೌರವ ಉಪಸ್ಥಿತರಿರುವರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಬರೋಡ ಉದ್ಯಮಿ ಶಶಿಧರ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಮರೋಡಿ ಶ್ರೀ ಪಾಶ್ವನಾಥ ಸ್ವಾಮಿ ಬಸದಿಯ ಆಡಳಿತ ಮೊಕ್ತೇಸರ ಹೇಮರಾಜ ಕೆ. ಬೆಳ್ಳಿಬೀಡು, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್, ಕಲ್ಲೇರಿ ಶ್ರೀ ಕುಕ್ಕಿನಂತಾಯ ದೈವಸ್ಥಾನದ ಅಧ್ಯಕ್ಷ ಪ್ರವೀಣ್ ಭಟ್ ಕಾನಂಗಿ, ನಿವೃತ್ತ ಶಿಕ್ಷಕ ಎಂ.ಕೆ. ಆರಿಗ ಗಾಳಿವನ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳ್ತಂಗಡಿ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್, ಮಂಗಳೂರು ಮಾಸ್ಟರ್ ಫ್ಲವರ್‌ನ ಮಾಲೀಕ ಪಕೀರಬ್ಬ ಅವರು ಪಾಲ್ಗೊಳ್ಳುವರು.
ರಾತ್ರಿ 7ರಿಂದ ಜಯಪ್ರಕಾಶ್ ಪಾಂಡಿ ಅವರು ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳಿಂದ ‘ಮಣಿಕಂಠ ಮಹಿಮೆ’ ಯಕ್ಷಗಾನ ಪ್ರದರ್ಶನ, ನಂತರ ಹಳೆವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್ ತಿಳಿಸಿದ್ದಾರೆ.