ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.