ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಪಟ್ಟಣ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗ
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಪಟ್ಟಣ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಫೆ.4ರಂದು ಬೆಳ್ತಂಗಡಿಯಲ್ಲಿ ಬೆಳಿಗ್ಗೆ ಬೈಕ್ ರ್ಯಾಲಿ ಜರುಗಿತು
ಫೆ. 6 ರಿಂದ ಫೆ .17ರವರೆಗೆ ಬೆಳ್ತಂಗಡಿ ತಾಲೂಕಿನ 48
ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥ ಸಂಚರಿಸಲಿದ್ದು, ಇದರ ಪೂರ್ವಭಾವಿಯಾಗಿ ತಾಲೂಕು ಮಟ್ಟದಲ್ಲಿ ಈ ಕಾಯ೯ಕ್ರಮ ನಡೆಯಿತು.
ಇಂದು ಫೆ.4.ರಂದು ಪೂರ್ವಾಹ್ನ 9ಗಂಟೆಯಿಂದ ಬೆಳ್ತಂಗಡಿ ಮುಖ್ಯ ರಸ್ತೆಯ ಅಯ್ಯಪ್ಪ ಗುಡಿಯಿಂದ ಬೆಳ್ತಂಗಡಿ ತಾಲೂಕು ಕಛೇರಿಯವರೆಗೆ ಬೈಕ್ ಜಾಥಾವು ಯಶಸ್ವಿಯಾಗಿ ನಡೆಯಿತು .
ತಹಸೀಲ್ದಾರ್ ಪೃಥ್ವಿ ಸಾನಿಕಮ್ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ತಾ.ಪಂಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸಂವಿಧಾನ ಜಾಗೃತಿ ಜಾಥದ ಮಹತ್ವವನ್ನು ತಿಳಿಸಿ ಫೆ.6ನೇ ತಾರೀಕಿನಿಂದ ತಾಲೂಕಿನಾದ್ಯಂತ ಸಂಚರಿಸಲಿರುವ ಜಾಥಕ್ಕೆ ಎಲ್ಲರ ಸಹಕಾರ ಕೋರಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ರ್ಯಾಲಿಯ ನೇತೃತ್ವ ವಹಿಸಿದ್ದರು.
ವೃತ್ತ ನಿರೀಕ್ಷಕ ಸುಬ್ರಪುರ್ ಮಟ್,ತಾ.ಪಂ.ಅಧೀಕ್ಷಕ ಡಿ.ಪ್ರಶಾಂತ್, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ,ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಧನಂಜಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು,NRLM ತಾಲೂಕು ಸಂಯೋಜಕ ಜಯಾನಂದ ಮತ್ತಿತರರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.