27.5 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿ

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24), ಬೆಳ್ತಂಗಡಿ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಫಾ(22), ಪಡಂಗಡಿ ಬದ್ರಿಯಾ ಮನ್ನೀಲ್ ನಿವಾಸಿ ಮಹಮ್ಮದ್ ಸಾಧಿಕ್(27) ಮತ್ತು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ 17ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.
ಬಂಧಿತರು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಒಟ್ಟು 42 ಸಿಮ್ ಖರೀದಿ ಮಾಡಿಸಿಕೊಂಡು ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಐದು ಜನ ಆರೋಪಿಗಳ ವಿರುದ್ಧ ಐಪಿಸಿ 1860(U/s- 420,120B ಜೊತೆಗೆ 34)( ವಂಚನೆ, ಒಳಸಂಚು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಬಂಧನವಾಗಿರುವ ಐದು ಜನ ಆರೋಪಿಗಳಲ್ಲಿ ನಾಲ್ಕು ಜನರನ್ನು ಫೆ.2 ರಂದು ಸಂಜೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕನಾಗಿರುವ ಕಾರಣದಿಂದ ಬಾಲಕನ ತಂದೆಯನ್ನು ಕರೆಸಿ ಬಾಲ ನ್ಯಾಯಲಯಕ್ಕೆ ಹಾಜರಾಗಲು ನೋಟಿಸ್‌ ನೀಡಿ ತಂದೆಯ ಜೊತೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Related posts

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya
error: Content is protected !!