24.8 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

ನೆರಿಯ: ಸಿಯೋನ್ ಆಶ್ರಮ ನಿರ್ಗತಿಕ, ಮಾನಸಿಕ ಅಸ್ವಸ್ಥರ ಮನೆ ತನ್ನ ಸ್ಥಾಪನೆಯ 25 ವರ್ಷಗಳನ್ನು ಮಾರ್ಚ್ 22 ರಂದು ಪೂರ್ಣಗೊಳಿಸಲಿದೆ. ಸಿಯೋನ್ ಆಶ್ರಮದ ಬೆಳ್ಳಿಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ 50ರ ಸುವರ್ಣ ಸಂಭ್ರಮ ಈ ಎರಡು ಸುಸಂಧರ್ಭಗಳನ್ನು ರಾಜ್ಯ ಮಟ್ಟದಲ್ಲಿ ಗುರುತಿಸಲ್ಪಡುವಂತೆ ವಿಭಿನ್ನವಾಗಿ ಆಚರಿಸಲು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಘನಸಾರಥ್ಯದಲ್ಲಿ ಸಮಾಲೋಚಿಸಿ ಮುಂದಡಿ ಇಟ್ಟಿದ್ದು, ಮಾರ್ಚ್ 22 ರಂದು ಜರುಗುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.


ಸಿಯೋನ್ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.5 ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಡಾ.ಹೇಮಾವತಿ ವಿ.ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿಯೋನ್ ಆಶ್ರಮ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಎಂ.ಪಿ.ಶ್ರೀನಾಥ್, ರಜತಮಹೋತ್ಸವ ಸ್ವಾಗತ ಸಮಿತಿಯ ಎಲ್ಲಾ ಸದಸ್ಯರುಗಳು, ಸಂಸ್ಥೆಯ ಆಡಳಿತ ಮಂಡಳಿಯವರು, ಹಿತೈಷಿಗಳು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!