April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

ಬೆಳ್ತಂಗಡಿ: ಮೂಲ್ಕಿಯಲ್ಲಿ ಮಾ 10 ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ” ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಲ್ಲಿ ಫೆ.5 ರಂದು ನಡೆಯಿತು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ್ ಕೋಟ್ಯಾನ್ ಕಾರ್ಯಕ್ರಮದ ಆಚರಣೆಯ ಕುರಿತು ಹಾಗೂ ಸಮಾವೇಶದ ಬಗ್ಗೆ ಮಾತನಾಡಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಅದ್ಯಕ್ಷ ಪೀತಾಂಬರ ಹೇರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ ಮೂಡುಪೆರಾರ,ಬೆಳ್ತಂಗಡಿ ಶ್ರೀ ಗ.ನಾ.ಸ್ವಾ.ಸೇ ಸಂಘದ ನಿಕಟ ಪೂರ್ವಾಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ,ಗೆಜ್ಜೆಗಿರಿ ಕ್ಷೇತ್ರದ ಬೆಳ್ತಂಗಡಿ ಸಂಚಾಲಕ ನಿತ್ಯಾನಂದ ನಾವರ,ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್,ತಾಲೂಕು ಯುವ ಬಿಲ್ಲವ ವೇದಿಕೆ ಅದ್ಯಕ್ಷ ಎಂ.ಕೆ ಪ್ರಸಾದ್,ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಪೂಜಾರಿ ಊರ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್ ಉಪಸ್ಥಿತರಿದ್ದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿಹಬ್ಬದ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಸಂಘದ ಈ ಸಂದರ್ಭದಲ್ಲಿ ರಾಜಸೇಖರ್ ಕೋಟ್ಯಾನ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರುಗಳಾದ ಕೆ.ವಸಂತ ಸಾಲಿಯಾನ್,ಗಂಗಾಧರ ಮಿತ್ತಮಾರ್, ಜಯರಾಮ್ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ,ಯುವವಾಹಿನಿ ಬೆಳ್ತಂಗಡಿ ಹಾಗೂ ವೇಣೂರು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿಯಿಂದ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲಕ್ಕೆ ಮಹಿಳಾ ನಿರ್ದೇಶಕರಾಗಿ ರಾಜಶ್ರೀ ರಮಣ್ ಹಾಗೂ ಶಾಂತಾ ಬಂಗೇರರವರನ್ನು ರಾಜ್ ಶೇಖರ್ ಕೋಟ್ಯಾನ್ ನಿಯುಕ್ತಿಗೊಳಿಸಿದರು.

ಬೆಳ್ತಂಗಡಿ ಶ್ರೀ ಗುರು ನಾರಾಯಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಯೋಗೀಶ್ ಕುಮಾರ್ ಕೆ.ಎಸ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಂದೀಪ್ ನೀರಳ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya
error: Content is protected !!