ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಧಿಕೃತವಾಗಿ ಫೆ. 5ರಂದು ಘೋಷಿಸಿದರು.

ಡಿಜಿಟಲ್ ಮೂಲಕ ಜಾಗೃತಿ ಸಂದೇಶವನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ದ.ಕ.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಡಿ.ಎಸ್ ರಘು, ಧರ್ಮಸ್ಥಳ ಗ್ರಾಮಪಂಚಾಯತ್ ಅಧ್ಯಕ್ಷೆ ವಿಮಲ,ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ ಸ್ವಾಗತಿಸಿದರು, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್ ವಂದಿಸಿದರು. ದೇವಿಪ್ರಸಾದ್ ಬೊಳ್ಮ ನಿರೂಪಿಸಿದರು.