April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

ಮರೋಡಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮರೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾವು ಮರೋಡಿ ಗ್ರಾಮ ಪಂಚಾಯತಿಗೆ ಆಗಮಿಸಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣಾನ್ ಇವರು ಹೂ ಮಾಲೆ ಹಾಕುವ ಮುಖಾಂತರ ಜಾಥಾವನ್ನು ಸ್ವಾಗತಿಸಿದರು. ನಾಡಗೀತೆಯೊಂದಿಗೆ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಗ್ರಾಮ ಪಂಚಾಯತು ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮಶ್ರೀ ಜೈನ್, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಯಶೋಧಾ, ಹೊಸಂಗಡಿ ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ, ಮುಂಡಾಜೆ ವಸತಿ ಶಾಲೆಯ ಪ್ರಾಂಶುಪಾಲರು. ಮಾವಿನಕಟ್ಟೆ ಮತ್ತು ಮರೋಡಿ ಶಾಲೆಯ ಮುಖ್ಯೋಪಾಧ್ಯಾಯರು, ನರೇಗಾ ತಾಲೂಕು ಐಇಸಿ ಸಂಯೋಜಕರಾದ ಶ್ರೀಮತಿ ವಿನಿಷಾ, ತಾಲೂಕು ವಿವಿಧ ಸಂಘಟನೆಗಳ ಮುಖಂಡರು, ಎನ್ ಆರ್ ಎಲ್ ಎಂ ಸಂಘದ ಅಧ್ಯಕ್ಷರಾದ ಶ್ರೀಮತಿ ವನಿತಾ, ಎಲ್ ಸಿ ಆರ್ ಪಿ. ಎಮ್ ಬಿ ಕೆ. ಸದಸ್ಯರು, ಗ್ರಾಮದ ಗಣ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಾವಿನಕಟ್ಟೆ ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬಣ್ಣಾನ್ ಇವರು ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾವಿನಕಟ್ಟೆ ಶಾಲಾ ವಿದ್ಯಾರ್ಥಿಗಳು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಬಹುಮಾನ ನೀಡಿ ಅಭಿನಂದಿಸಿದರು. ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.

ಡಾ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಪಂಚಾಯತ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.

Related posts

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!