July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

ಉಜಿರೆ: ಫೆ.14 ಬುಧವಾರ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.


ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಮೂತ್ರನಾಳದ ಸೋಂಕು ತಪಾಸಣೆ, ಸ್ತ್ರನದ ತಪಾಸಣೆ, ಗರ್ಭಾಶಯದ ತಪಾಸಣೆ, ಮಹಿಳೆಯರ ಕ್ಯಾನ್ಸರ್ ಮುಂತಾದ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಸ್ವರ್ಣಲತಾ, ಡಾ. ಪ್ರಿಯಾಂಕ, ಡಾ. ಅನ್ವಿತಾ ಹಾಗೂ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ್ ಈ ಶಿಬಿರದಲ್ಲಿ ಮಹಿಳೆಯರ ತಪಾಸಣೆ ನಡೆಸಲಿದ್ದಾರೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬೆಳಿಗ್ಗೆ10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತ, ಸ್ಕ್ಯಾನಿಂಗ್ 50%, ಔಷಧದಲ್ಲಿ 10%, ಒಳರೋಗಿ ವಿಭಾಗದಲ್ಲಿ 10%, ರಕ್ತಪರೀಕ್ಷೆ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ.

Related posts

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!