ಚಾರ್ಮಾಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಸಹಾಯಕ ನಿರ್ದೇಶಕ ಜೋಸೆಫ್ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಗ್ರಾಮಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ನೀಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮರವರು ಸ್ವಾಗತಿಸಿದರು. ಕಾರ್ಯದರ್ಶಿಯವರು ಅನುಪಾಲನ ವರದಿಯನ್ನು ಸಭೆಯ ಮುಂದಿಟ್ಟರು.
ಕುಡಿಯುವ ನೀರು ಸರಿಯಾಗಿ ಸರಬುರಾಜು ಆಗುತ್ತಿಲ್ಲ. ಕರೆಂಟ್ ಇಲ್ಲದಿದ್ದರೆ ನೀರು ಬರುವಾಗ ಲೇಟ್ ಆಗುತ್ತಿದೆ. ಕಳೆದ ಮೂರು ಅವಧಿಯಿಂದ ನೀರಿನ ಸಮಸ್ಯೆ ಬಗ್ಗೆ ತಿಳಿಸಿದರು. ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಗ್ರಾಮಸ್ಥರು ಪಂಚಾಯತ್ ನ್ನು ಪ್ರಶ್ನಿಸಿದರು. ಕೂಡಲೇ ಸರಿಪಡಿಸುವ ಭರವಸೆಯನ್ನು ಪಿಡಿಓ ನೀಡಿದರು.
ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿದೆ ಇರುವುದರಿಂದ ಬೆಳಿಗ್ಗೆ ವಾಕಿಂಗ್ ಹೋಗುವಾಗ ಕಷ್ಟವಾಗುತ್ತಿದೆ. ಬೀದಿ ದೀಪ ವಿಸ್ತರಿಸುವಂತೆ ಗ್ರಾಮಸ್ಥರೊರ್ವರು ಒತ್ತಾಯಿಸಿದರು.
ಸರಕಾರಿ ಆಸ್ಪತ್ರೆಗೆ ಸಂಚರಿಸುವ ರಸ್ತೆಯು ಅವ್ಯವಸ್ಥೆಯಿಂದ ಕೂಡಿದ್ದು ಕೂಡಲೇ ದುರಸ್ಥಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಚಾರ್ಮಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ಥಳಿಯ 11 ಅಂಗನವಾಡಿ ಕೇಂದ್ರಗಳಿಗೆ ತಲಾ 10 ರಂತೆ ಮಕ್ಕಳು ಕುಳಿತುಕೊಳ್ಳುವ ಚಯರ್ ನೀಡಲಾಯಿತು.