ಉಜಿರೆ: ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಲಯ, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ 4ನೇ ಸುತ್ತಿನಲ್ಲಿ (ಸೆಮಿಫೈನಲ್) ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಸಾಗರ್ ಪ್ರಶಂಸಾ ಪ್ರಮಾಣಪತ್ರ ಪಡೆದಿದ್ದಾರೆ.
ಸ್ಪರ್ಧೆಯ ಪ್ರಾಥಮಿಕ ಹಂತದ ಆನ್‌ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದ ಸಾಗರ್, ಮೈಸೂರು ವಿಭಾಗಕ್ಕೆ ಅರ್ಹತೆ ಪಡೆದ 100 ವಿದ್ಯಾರ್ಥಿಗಳಲ್ಲಿ 2ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.
ವಿದ್ಯಾರ್ಥಿಗೆ ಪ್ರಮಾಣಪತ್ರದೊಂದಿಗೆ ಎಕ್ಸ್ಪರಿಮೆಂಟ್ ಕಿಟ್ ಮತ್ತು 500 ರೂ. ನಗದು ಬಹುಮಾನ ಲಭಿಸಿದೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ಎನ್. ನಾಯಕ್ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.