37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

ಬೆಳ್ತಂಗಡಿ: ಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡುವ ಕುರಿತು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬೆಳ್ತಂಗಡಿ ತಹಸೀಲ್ದಾರ್ ಮೂಲಕ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ವತಿಯಿಂದ pಫೆ.7ರಂದು ಮನವಿ ಸಲ್ಲಿಸಲಾಯಿತು.


ಅರಣ್ಯ ಇಲಾಖೆಯ ಬೆಂಗಳೂರು ಕಚೇರಿಯಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸಮಾಜದ ಅನ್ನಪೂರ್ಣ ರಾನಡೆಯವರು ಶಿವಮೊಗ್ಗದಲ್ಲಿ ಇಲಾಖೆ ನಡೆಸಿದ ಸ್ಟೆನೋಗ್ರಾಫರ್ ಪರೀಕ್ಷೆ ಮೇಲ್ವಿಚಾರಕಿಯಾಗಿ ಆಗಮಿಸಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಘಟನೆ ನಡೆದಿತ್ತು. ಘಟನೆ ನಡೆದು ಒಂದು ವಾರ ಕಳೆದರು ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಿಲ್ಲ.ರೈಲು ಪ್ರಯಾಣ ಮಹಿಳೆಯರಿಗೆ ಎಷ್ಟು ಸುರಕ್ಷಿತ?, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಭದ್ರತೆ ಒದಗಿಸಬೇಕಾದ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿ ನಾರಾಯಣ ಫಡಕೆ, ಪದಾಧಿಕಾರಿಗಳಾದ ವಿವೇಕ್ ಕೇಳ್ಕರ್, ಯಶವಂತ ಪಟವರ್ಧನ್,ಯೋಗೀಶ್ ಭಿಡೆ,ಗಣೇಶ ಶೆಂಡ್ಯೆ,ಲಾಯಿಲ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಸೂರ್ಯನಾರಾಯಣ ಪಾಳಂದೆ, ಮುಂಡಾಜೆ ಗ್ರಾ.ಪಂ.ಮಾಜಿ ಸದಸ್ಯೆ
ಅಶ್ವಿನಿ ಹೆಬ್ಬಾರ್, ಲತಾ ಭಟ್ ಅರೆಕಲ್ಲು, ರಶ್ಮಿ ಪಟವರ್ಧನ್,ಡಾ.ದೀಪಾಲಿ ಡೋಂಗ್ರೆ, ತಾ.ಪಂ. ಮಾಜಿ ಸದಸ್ಯ ವಿಷ್ಣು ಮರಾಠೆ,ನ್ಯಾಯವಾದಿ ಶೈಲೇಶ್ ಠೋಸರ್, ಪತ್ರಕರ್ತ ಅರವಿಂದ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!