ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆಯು ಫೆ.7ರಂದು ಬೆಳಾಲು ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಪೆರಿಯಡ್ಕ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿ ಆದ್ಯಾ ವಹಿಸಿದ್ದರು.
ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣ ಇಲಾಖಾ ಮಾಹಿತಿ ನೀಡಿದರು.
ಮಕ್ಕಳ ಪರಿಸ್ಥಿತಿಯನ್ನು ತಳಮಟ್ಟದಲ್ಲೇ ಗಮನಿಸಿ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ಯೋಜನೆಯನ್ನು ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಉಜಿರೆ ಸಿಆರ್ ಪಿ ಪ್ರತಿಮಾ ಹಳೆಪೇಟೆ, ಉಪಾಧ್ಯಕ್ಷೆ ಗೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಬಾಯಿ, ಪಂಚಾಯತ್ ಸದಸ್ಯರಾದ ಸತೀಶ್ ಎಳ್ಳುಗದ್ದೆ, ಕೃಷ್ಣಯ್ಯ ಆಚಾರ್ಯ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಬೆಳಾಲು ಎಸ್.ಡಿ.ಎಂ ಪ್ರೌಢ ಶಾಲಾ ವಿದ್ಯಾರ್ಥಿ ಇಂದುಮತಿ ಸ್ವಾಗತಿಸಿದರು. ಅಂಕಿತ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾಯ ಬೆಳಾಲು ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿ ತನಿಷ್ಕಾ ಧನ್ಯವಾದವಿತ್ತರು.