29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

ಉಜಿರೆ: ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಲಯ, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ 4ನೇ ಸುತ್ತಿನಲ್ಲಿ (ಸೆಮಿಫೈನಲ್) ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಸಾಗರ್ ಪ್ರಶಂಸಾ ಪ್ರಮಾಣಪತ್ರ ಪಡೆದಿದ್ದಾರೆ. 

ಸ್ಪರ್ಧೆಯ ಪ್ರಾಥಮಿಕ ಹಂತದ ಆನ್‌ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದ ಸಾಗರ್, ಮೈಸೂರು ವಿಭಾಗಕ್ಕೆ ಅರ್ಹತೆ ಪಡೆದ 100 ವಿದ್ಯಾರ್ಥಿಗಳಲ್ಲಿ 2ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.

ವಿದ್ಯಾರ್ಥಿಗೆ ಪ್ರಮಾಣಪತ್ರದೊಂದಿಗೆ ಎಕ್ಸ್ಪರಿಮೆಂಟ್ ಕಿಟ್ ಮತ್ತು 500 ರೂ. ನಗದು ಬಹುಮಾನ ಲಭಿಸಿದೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ಎನ್. ನಾಯಕ್ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related posts

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
error: Content is protected !!