29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಅಳದಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಳದಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ, ನಾರಾಯಣ ಗುರುಸ್ವಾಮಿ ಸೇವಾ ಸಂಘ ಅಳದಂಗಡಿ ವಲಯ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ತಜ್ಞ ವೈದ್ಯ  ತಂಡದವರಿಂದ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ ಹಾಗೂ ಭಾರತೀಯ ಅಂಚೆ ಇಲಾಖೆ ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಫೆ.11  ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30 ರವರೆಗೆ ಶ್ರೀ ಗುರು ಸಭಾ ಭವನ ಅಳದಂಗಡಿ ಇಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ, ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ. ಪಿ ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ (ಹಲ್ಲುಗಳನ್ನು ಶುಚಿ ಮಾಡುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು), ಉಚಿತ ಕ್ಯಾನ್ಸರ್ ತಪಾಸಣೆ, ಉಚಿತ ಔಷಧ ವಿತರಣೆ , ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯಗಳು ಲಭ್ಯವಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!