April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ, ಹಾಗೂ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya
error: Content is protected !!