29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!